TSK

TSK · ಲೂಕನು 8:25

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.

ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,

‹ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!›

ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, ‹“ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ”› ಎಂದು ಹೇಳಿದನು.

ತರುವಾಯ ಆತನು ಅವರನ್ನು, ‹“ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?”› ಎಂದು ಕೇಳಲು

ಯೇಸು ಆಕೆಗೆ, ‹“ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?”› ಎಂದು ಉತ್ತರ ಕೊಟ್ಟನು