TSK

TSK · ಲೂಕನು 8:50

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

ಯೇಸು ಅವನಿಗೆ, ‹“‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!”› ಎಂದು ಹೇಳಿದನು.

ಯೇಸು ಆಕೆಗೆ, ‹“ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು”› ಎಂದು ಹೇಳಿದನು.

ಯೇಸು ಆಕೆಗೆ, ‹“ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?”› ಎಂದು ಉತ್ತರ ಕೊಟ್ಟನು

ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.