TSK

TSK · ಲೂಕನು 9:29

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.

ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.

¶ ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.

ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.

ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.

¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.