TSK

TSK · ಲೂಕನು 9:38

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.

ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.

ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.