TSK

TSK · ಲೂಕನು 9:47

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.

ಯೇಸು ಅವರ ಆಲೋಚನೆಗಳನ್ನು ತಿಳಿದು, ‹“ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?›

¶ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

¶ ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, ‹“ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?›

ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.

‹ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ›‹ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.›‹ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.›