TSK

TSK · ಲೂಕನು 9:52

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

‹‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ.›

‹ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,›

¶ ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.