TSK

TSK · ಮಲಾಕಿಯ 2:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.

ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.

ಇಗೋ, ನಾನು ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ.

ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.

¶ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.

ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.

ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.

ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.

ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;

¶ ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?

ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.