ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
TSK
TSK · ಮಲಾಕಿಯ 2:13
مراجع Treasury of Scripture Knowledge في ಕನ್ನಡ IRV.
¶ ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.
¶ ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.