¶ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
TSK
TSK · ಮಲಾಕಿಯ 2:15
مراجع Treasury of Scripture Knowledge في ಕನ್ನಡ IRV.
ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು,
¶ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.
ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.
ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.
ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ.
“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
¶ “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.
‹ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.›
‹ದೇವರಾದರೋ ಸೃಷ್ಟಿಯ ಮೊದಲಿನಿಂದಲೇ›‹ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.›
ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.
¶ ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.