ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
TSK
TSK · ಮಲಾಕಿಯ 3:13
مراجع Treasury of Scripture Knowledge في ಕನ್ನಡ IRV.
ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ.
ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”
¶ “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.
“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.