TSK

TSK · ಮಾರ್ಕನು 1:28

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.

ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,

ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.