TSK

TSK · ಮಾರ್ಕನು 1:40

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.

ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.

ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.

¶ ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?

ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,

‹ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.›

ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.

¶ ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.

¶ ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,

¶ ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,