TSK

TSK · ಮಾರ್ಕನು 10:39

مراجع Treasury of Scripture Knowledge في ಕನ್ನಡ IRV.

العودة إلى المقطع

‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›

‹“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ”› ಎಂದನು.

‹ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.›

¶ ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.