TSK

TSK · ಮಾರ್ಕನು 12:11

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’

ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.

ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;

ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.