ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.
TSK
TSK · ಮಾರ್ಕನು 12:17
مراجع Treasury of Scripture Knowledge في ಕನ್ನಡ IRV.
¶ ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, ‹“ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?”› ಎಂದು ಕೇಳಿದನು.
ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
‹ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.›
ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,
ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.