TSK

TSK · ಮಾರ್ಕನು 12:37

مراجع Treasury of Scripture Knowledge في ಕನ್ನಡ IRV.

العودة إلى المقطع

‹ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.›

ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.

ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.

¶ ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.

ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?