¶ ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.
TSK
TSK · ಮಾರ್ಕನು 12:44
مراجع Treasury of Scripture Knowledge في ಕನ್ನಡ IRV.
ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.
¶ ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.
¶ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.
¶ ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
‹ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.›
ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?