TSK

TSK · ಮಾರ್ಕನು 12:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,

ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.

ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.

‹ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು”› ಅಂದನು.

‹ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.›

‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›

¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

¶ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.