TSK

TSK · ಮಾರ್ಕನು 14:24

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.

ಅದಕ್ಕೆ ಯೇಸು ಅವರಿಗೆ, ‹“ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.›

ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ”› ಅಂದನು.

ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.