TSK

TSK · ಮಾರ್ಕನು 14:37

مراجع Treasury of Scripture Knowledge في ಕನ್ನಡ IRV.

العودة إلى المقطع

ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.

ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.

ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, ‹“ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?›

¶ ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.

¶ ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,

ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.