¶ ‹“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.›
TSK
TSK · ಮಾರ್ಕನು 14:38
مراجع Treasury of Scripture Knowledge في ಕನ್ನಡ IRV.
‹ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ”› ಎಂದು ಹೇಳಿದನು.
‹ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ”› ಅಂದನು.
ಅವರಿಗೆ, ‹“ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ”› ಎಂದು ಹೇಳಿದನು.
¶ ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
¶ ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
¶ ‹“ಎಚ್ಚರವಾಗು, ಸಾಯುವ ಹಾಗಿರುವ›‹ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.›