TSK

TSK · ಮಾರ್ಕನು 15:19

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.

ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.

ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.

ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.

ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.

ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”

ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,

ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.

ಅದಕ್ಕೆ ಯೇಸು ಅವರಿಗೆ, ‹“ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?›

ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

¶ ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.

ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,

ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.