TSK

TSK · ಮಾರ್ಕನು 15:5

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.

ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.

ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.

ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.