TSK

TSK · ಮಾರ್ಕನು 16:11

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.

ಅದಕ್ಕಾತನು, ‹“ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ”› ಅಂದನು.

ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.