TSK

TSK · ಮಾರ್ಕನು 16:18

مراجع Treasury of Scripture Knowledge في ಕನ್ನಡ IRV.

العودة إلى المقطع

ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.

“ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,

ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.

ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.

ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.

ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.

ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,