TSK

TSK · ಮಾರ್ಕನು 16:19

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

¶ ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.

‹ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?›

‹ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ”› ಎಂದನು.

¶ ‹“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ›‹ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.›

ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.

ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.

ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.

ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;

ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.

ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”

¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

¶ ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.

¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.

¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.