TSK

TSK · ಮಾರ್ಕನು 16:7

مراجع Treasury of Scripture Knowledge في ಕನ್ನಡ IRV.

العودة إلى المقطع

‹“ಆದರೆ ನಾನು ಜೀವಿತನಾಗಿ ಎದ್ದ ಮೇಲೆ›‹ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು”› ಎಂದು ಹೇಳಿದನು.

ಆಗ ಯೇಸು ಅವರಿಗೆ, ‹“ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು”› ಎಂದು ಹೇಳಿದನು.

‹ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು”› ಎಂದು ಹೇಳಿದನು.

¶ ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,

ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.

ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.