TSK

TSK · ಮಾರ್ಕನು 16:9

مراجع Treasury of Scripture Knowledge في ಕನ್ನಡ IRV.

العودة إلى المقطع

ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.

ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.

ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,

ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.

¶ ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.

ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.