TSK

TSK · ಮಾರ್ಕನು 2:16

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.

‹ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ›‹ಸುಂಕದವನಂತೆಯೂ ಇರಲಿ.›

ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.

ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.

¶ ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.

ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.