TSK

TSK · ಮಾರ್ಕನು 2:5

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು.

ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.

ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.

¶ ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, ‹“ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ”› ಎಂದು ಹೇಳಿದನು.

‹ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?›

ಯೇಸು ಅವರ ನಂಬಿಕೆಯನ್ನು ನೋಡಿ, ‹“ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ”› ಅಂದನು.

ಯೇಸು ಆಕೆಗೆ, ‹“ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು”› ಎಂದು ಹೇಳಿದನು.

ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, ‹“ನಿನಗೆ ಸ್ವಸ್ಥವಾಯಿತಲ್ಲಾ;›‹ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು”› ಎಂದನು.

ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.

ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.