TSK

TSK · ಮಾರ್ಕನು 3:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.

¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.

ಆತನು ಆಕೆಗೆ, ‹“ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ”› ಎಂದು ಹೇಳಿದನು.

ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.