TSK

TSK · ಮಾರ್ಕನು 4:37

مراجع Treasury of Scripture Knowledge في ಕನ್ನಡ IRV.

العودة إلى المقطع

ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.

¶ ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.

¶ ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, ‹“ಸಮುದ್ರದ ಆಚೇ ದಡಕ್ಕೆ ಹೋಗೋಣ”› ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.

ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.