TSK

TSK · ಮಾರ್ಕನು 6:14

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.

¶ ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,

ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.

ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.

ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.

¶ ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,

¶ ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.