TSK

TSK · ಮಾರ್ಕನು 6:23

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.

ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.

ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.›