TSK

TSK · ಮಾರ್ಕನು 6:7

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.

¶ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.

¶ ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.

ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

¶ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.

¶ ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.