ವಿಮೋಚನಕಾಂಡ 20:12
TSK
¶ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
TSK
مراجع Treasury of Scripture Knowledge في ಕನ್ನಡ IRV.
¶ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
¶ “‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
¶ “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
‹ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ”› ಎಂದು ಹೇಳಿದನು.