TSK

TSK · ಮಾರ್ಕನು 7:14

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.

ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.

ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.

ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು.

¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›

¶ ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,