TSK

TSK · ಮಾರ್ಕನು 7:15

مراجع Treasury of Scripture Knowledge في ಕನ್ನಡ IRV.

العودة إلى المقطع

ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.

‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›

ಆತನು ಅವರಿಗೆ, ‹“ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,›

ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.

ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.

ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.

¶ ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.