TSK

TSK · ಮಾರ್ಕನು 7:22

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.

¶ ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು

ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು

ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.

ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.

ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.

‹ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!›

ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”