TSK

TSK · ಮಾರ್ಕನು 8:18

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.

ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ.

ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!

ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

‹“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ,› ‹‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.› ‹ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.›

“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.

¶ ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.