TSK

TSK · ಮಾರ್ಕನು 8:35

مراجع Treasury of Scripture Knowledge في ಕನ್ನಡ IRV.

العودة إلى المقطع

“ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.

¶ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.

‹ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.›

‹ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.›

¶ ‹“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.›

‹ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.›

‹ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.›

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.

¶ ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.

ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.

¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.