TSK

TSK · ಮಾರ್ಕನು 9:23

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು, ‹“ಬಾ”› ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.

ಅದಕ್ಕೆ ಯೇಸು, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.›

ಕರ್ತನು, ‹“ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು”› ಅಂದನು.

ಯೇಸು ಆಕೆಗೆ, ‹“ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?”› ಎಂದು ಉತ್ತರ ಕೊಟ್ಟನು

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.