ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
TSK
TSK · ಮಾರ್ಕನು 9:25
مراجع Treasury of Scripture Knowledge في ಕನ್ನಡ IRV.
¶ ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.
ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
ಯೇಸು ದೆವ್ವವನ್ನು ಗದರಿಸಿ, ‹“ಸುಮ್ಮನಿರು, ಇವನನ್ನು ಬಿಟ್ಟು ಹೋಗು”› ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.
ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
¶ ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.