¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
TSK
TSK · ಮತ್ತಾಯನು 1:6
مراجع Treasury of Scripture Knowledge في ಕನ್ನಡ IRV.
¶ ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.
ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.
ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು.
¶ ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.
¶ ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು.
ಆರನೆಯವನು ಓಚೆಮ್, ಏಳನೆಯವನು ದಾವೀದ್.
ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,
ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.
¶ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.