TSK

TSK · ಮತ್ತಾಯನು 10:1

مراجع Treasury of Scripture Knowledge في ಕನ್ನಡ IRV.

العودة إلى المقطع

‹ನಮ್ಮನ್ನು ಶೋಧನೆಯೊಳಗೆ ಸೇರಿಸದೆ› ‹ಕೆಡುಕನಿಂದ; ನಮ್ಮನ್ನು ತಪ್ಪಿಸು›

¶ ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.

ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›

¶ ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,

ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

‹ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.›

‹ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು›‹ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ”› ಎಂದು ಹೇಳಿದನು.

ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.

‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›

‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.

ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;

ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.