TSK

TSK · ಮತ್ತಾಯನು 10:15

مراجع Treasury of Scripture Knowledge في ಕನ್ನಡ IRV.

العودة إلى المقطع

‹ನಿಮಗೆ ಸತ್ಯವಾಗಿ ಹೇಳುತ್ತೇನೆ,›‹ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.›

‹ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.›

‹ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ”› ಎಂದು ಹೇಳಿದನು.

‹ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.›

ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.