ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
TSK
TSK · ಮತ್ತಾಯನು 10:7
مراجع Treasury of Scripture Knowledge في ಕನ್ನಡ IRV.
¶ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
‹ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು?› ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ‹ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›
ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
ಆದರೆ ಯೇಸು ಅವನಿಗೆ, ‹“ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು”› ಎಂದು ಹೇಳಿದನು.
¶ ‹“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.›
ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.