TSK

TSK · ಮತ್ತಾಯನು 12:2

مراجع Treasury of Scripture Knowledge في ಕನ್ನಡ IRV.

العودة إلى المقطع

ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.

ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.

¶ ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.

ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.

¶ ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.

‹“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?”› ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.

ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,

ಯೇಸು ಅವರಿಗೆ ‹“ನಾನು›‹ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.›