ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
TSK
TSK · ಮತ್ತಾಯನು 12:45
مراجع Treasury of Scripture Knowledge في ಕನ್ನಡ IRV.
‹ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು›
‹ಕುರುಡ ಮಾರ್ಗದರ್ಶಿಗಳೇ, ನೀವು›‹ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.›
¶ ಯೇಸು, ‹“ನಿನ್ನ ಹೆಸರು ಏನೆಂದು”› ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,
‹ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು”› ಅಂದನು.
¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.