TSK

TSK · ಮತ್ತಾಯನು 13:52

مراجع Treasury of Scripture Knowledge في ಕನ್ನಡ IRV.

العودة إلى المقطع

ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.

ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.

¶ ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.

‹ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.›

‹ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’›

ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.

ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.

¶ ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.